Site icon Kundapra.com ಕುಂದಾಪ್ರ ಡಾಟ್ ಕಾಂ

ಚೆಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಎಸ್‌ವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀಲತಾ ರಾಜ್ಯ ಮಟ್ಟಕ್ಕೆ ಆಯ್ಕೆ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಎಸ್‌ವಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಶ್ರೀಲತಾ ನಾಯಕ್ ಅವರು ವಿಜೇತರಾಗಿ  ರಾಜ್ಯಮಟ್ಟಕ್ಕೆ  ಆಯ್ಕೆಯಾಗಿರುತ್ತಾರೆ.

ಅವರಿಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗ, ಹಳೆ ವಿದ್ಯಾರ್ಥಿ ಸಂಘ, ಪೋಷಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದರು.

Exit mobile version