Kundapra.com ಕುಂದಾಪ್ರ ಡಾಟ್ ಕಾಂ

ಎಸ್.ವಿ. ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ

ಗಂಗೊಳ್ಳಿ: ಯಾವುದೇ ಶೈಕ್ಷಣಿಕ ಸಂಸ್ಥೆ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕಾದರೆ ಕ್ರೀಡೆ ಅತ್ಯವಶ್ಯ. ಹೀಗಾಗಿ ಶೈಕ್ಷಣಿಕ ಸಂಸ್ಥೆಗಳು ಸದಾ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಕ್ರೀಡಾಪಟುಗಳನ್ನು ಹುರಿದುಂಬಿಸಬೇಕು. ಕ್ರೀಡಾಪಟುಗಳು ಯಾವುದೇ ಜಾತಿ ಮತ ಪಂಥಗಳ ಬೇಧ ಮಾಡದೆ ಕ್ರೀಡಾಸ್ಪೂರ್ತಿಯಿಂದ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಗಂಗೊಳ್ಳಿಯ ಶ್ರೀ ಸಿದ್ಧಿ ಫ್ರೀಜರ‍್ಸ್ ಎಂಡ್ ಎಕ್ಸ್‌ಪೋರ್ಟ್ಸ್‌ನ ಜನರಲ್ ಮ್ಯಾನೇಜರ್ ಎಂ.ಎಂ.ಸುವರ್ಣ ಹೇಳಿದರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿ ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಉಪಸ್ಥಿತರಿದ್ದರು.

ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಆರ್. ಎನ್.ರೇವಣಕರ್ ಸ್ವಾಗತಿಸಿದರು. ಉಪನ್ಯಾಸಕ ಭಾಸ್ಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ವಾಮನದಾಸ ಭಟ್ ವಂದಿಸಿದರು.

Exit mobile version