Site icon Kundapra.com ಕುಂದಾಪ್ರ ಡಾಟ್ ಕಾಂ

ಈಜು ಸ್ಪರ್ದೆಯಲ್ಲಿ ದಿಗಂತ ಕೋಟತಟ್ಟು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ವಾಸುದೇವ ಕೃಪಾ ಆಂಗ್ಲ ಮಾಧ್ಯಮ ಶಾಲೆ ಬೈಲೂರು ಸಂಯೋಜನೆಯಲ್ಲಿ ಮಾಹೆ ಮಣಿಪಾಲ ಇಲ್ಲಿಯ ಎಂ.ಐ.ಟಿ ಈಜು ಕೊಳದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಈಜು ಸ್ಪರ್ದೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ದಿಗಂತ ಕೋಟತಟ್ಟು ಅವರು 50 ಮೀಟರ್ ಬ್ರೆಸ್ಟ್ ಸ್ಟ್ರೋಕ್, 100 ಮೀಟರ್ ಬೆಸ್ಟ್ ಸ್ಟ್ರೋಕ್ ಹಾಗೂ 200 ಮೀಟರ್ ಫ್ರೀಸ್ಟೈಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಪ್ರಥಮ್ ಬಾರಿಕೆರೆ 50 ಮೀಟರ್ ಬ್ರೆಸ್ಟ್ರೋಕ್, 100 ಮೀಟರ್ ಬ್ರೆಸ್ಟ್ರೋಕ್, 200 ಮೀಟರ್ ಫ್ರೀಸ್ಟೈಲ್ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ಈರ್ವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಶ್ರೀಧರ್ ಉಳಿತಾಯ ಹಾಗೂ ರಾಜರಾಮ ನಾವಡ ತರಬೇತಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಕ್ರೀಡಾಸಾಧನೆಯನ್ನು ಗೀತಾನಂದ ಪೌಂಢೇಶನ್ ಪ್ರವರ್ತಕ ಆನಂದ ಸಿ. ಕುಂದರ್, ಅಧ್ಯಕ್ಷರು ಸರ್ವಸದಸ್ಯರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಮುಖ್ಯೋಪಾಧ್ಯಾಯರು, ಅಧ್ಯಕ್ಷರು ಮತ್ತು ಸರ್ವಸದಸ್ಯರು ಶಾಲಾ ಹಳೆವಿದ್ಯಾರ್ಥಿ ಸಂಘಟನೆ, ದೈಹಿಕ ಶಿಕ್ಷಣ ಶಿಕ್ಷಕರು, ಹಾಗೂ ಅಧ್ಯಾಪಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Exit mobile version