Site icon Kundapra.com ಕುಂದಾಪ್ರ ಡಾಟ್ ಕಾಂ

ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ. 
ಕುಂದಾಪುರ:
ನಿಸ್ವಾರ್ಥ ಮನೋಭಾವದ ಸೇವೆಯೇ ನಿಜವಾದ ಧರ್ಮ. ಅಂತಹ ಸೇವಾ ಮನೋಭಾವನೆಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದು ಸೀನಿಯರ್ ಟ್ಯಾಕ್ಸ್ ಕನ್ಸಲ್ಟೆಂಟ್ ಜತಿಂದ್ರ ಮರವಂತೆ ಅಭಿಪ್ರಾಯಪಟ್ಟರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಅವರ ಸಹಾಯದೊಂದಿಗೆ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್‌ಕೆ ಸ್ವಾಗತಿಸಿದರು. ಉಪನ್ಯಾಸಕಿ ಪ್ರಫುಲ್ಲಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ಗೌತಮಿ ನಾಯಕ್ ವಂದಿಸಿದರು.

Exit mobile version