Site icon Kundapra.com ಕುಂದಾಪ್ರ ಡಾಟ್ ಕಾಂ

ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿನಿ ಪ್ರಥಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಲಯನ್ಸ್ ಕ್ಲಬ್ ಹಂಗಳೂರು ಇವರು ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಸಲುವಾಗಿ ಆದಿತ್ಯವಾರ ದೇಶಭಕ್ತಿಗೀತೆ ಸ್ಪರ್ಧೆಯನ್ನು ಆಯೋಜಿಸಿದರು.

ಕುಂದಾಪುರ ತಾಲೂಕಿನ ಅನೇಕ ಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದು, ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪೂರ್ವೀ ಜಗನ್ನಾಥ್ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಹಾಗೆಯೇ ಹತ್ತನೇ ತರಗತಿಯ ದಾಕ್ಷಾಯಣಿ ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ.

ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ವಿದ್ಯಾರ್ಥಿಗಳನ್ನು ಹರಸಿ, ಅಭಿನಂದಿಸಿದರು.

Exit mobile version