ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವೃಂದಾವನಸ್ಥ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರ ಜನ್ಮ ದಿನೋತ್ಸವವನ್ನು ಇಲ್ಲಿನ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಭಕ್ತಿ ಶ್ರದ್ಧಾಪೂರ್ವಕವಾಗಿ ಆಚರಿಸಲಾಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದಿ. ಎನ್. ಜಯವಂತ ನಾಯಕ್ ಕುಟುಂಬಸ್ಥರ ಪರವಾಗಿ ಡಾ. ಸುಖಾನಂದ ಶೆಣೈ ದಂಪತಿ ಮತ್ತು ದೇವಸ್ಥಾನದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್ ಅವರು ಸೇವೆಯನ್ನು ಸಮರ್ಪಿಸಿದರು.
ಶ್ರೀಗಳ ಜನ್ಮ ದಿನೋತ್ಸವದ ಅಂಗವಾಗಿ ಶ್ರೀ ವೆಂಕಟರಮಣ ದೇವರಿಗೆ ಮಧ್ಯಾಹ್ನ ಪ್ರಸನ್ನ ಪೂಜೆ, ಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.
ದೇವಳದ ಆಡಳಿತ ಮಂಡಳಿಯ ಜಿ. ವೇದವ್ಯಾಸ ಕೆ. ಆಚಾರ್ಯ, ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಜಿಎಸ್‌ಬಿ ಸಮಾಜ ಬಾಂಧವರು ಮತ್ತಿತರರು ಉಪಸ್ಥಿತರಿದ್ದರು.

