Site icon Kundapra.com ಕುಂದಾಪ್ರ ಡಾಟ್ ಕಾಂ

ಬಾರ್ಕೂರು ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಮೆಮೋರಿಯಲ್ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ವತಿಯಿಂದ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ನೇಶನಲ್ ಪದವಿಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಶ್ರೀ ರಾಮ ಭಟ್ ಸಜನ್‌ಗದ್ದೆ  ಅವರು ಕಾರ್ಯಕ್ರಮ ಉದ್ಘಾಟಿಸಿ,  ಪದ್ಮಶ್ರೀ ಡಾ. ಎಸ್.ಆರ್. ರಂಗನಾಥನ್ ಬದಕು ಮತ್ತು ಸಾಧನೆಗಳನ್ನು ಸ್ಮರಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಭಾಸ್ಕರ್ ಶೆಟ್ಟಿ ಎಸ್. ಅವರು ಕಾಲೇಜಿನ ಗ್ರಂಥಾಲಯವನ್ನು ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.

ಕಾಲೇಜಿನ ಗ್ರಂಥಪಾಲಕ ಡಾ. ಹರೀಶ್ ಸಿ.ಕೆ. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕಿ ರೋಹಿಣಿ ಹೆಚ್. ಬಿ . ಕಾರ್ಯಕ್ರಮವನ್ನು ನಿರೂಪಿಸಿ, ಅಧ್ಯಾಪಕ ಕಾರ್ಯದರ್ಶಿಗಳಾದ ಪಾಪಣ್ಣ ಎನ್. ಎ. ವಂದಿಸಿದರು. ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು  ಪಾಲ್ಗೊಂಡು ಕಾರ್ಯಕ್ರಮವನ್ನು ಸಂಪನ್ನಗೊಳಿಸಿದರು.

Exit mobile version