Site icon Kundapra.com ಕುಂದಾಪ್ರ ಡಾಟ್ ಕಾಂ

ಯೋಗಾಸನ ಸ್ಪರ್ಧೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ                    

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕತ್ತೂರು ಇವರ ಸಂಯುಕ್ತಾ ಆಶ್ರಯದಲ್ಲಿ ನಡೆದ , ಕುಂದಾಪುರ  ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಶ್ರೀನಿಧಿ ಪ್ರಕಾಶ್ ಗೌಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ.

Exit mobile version