ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಒತ್ತೆಯಾಗಿಟ್ಟುಕೊಂಡು ಹೋರಾಡಿ ನಿವೃತ್ತಿ ಹೊಂದಿದ ಯೋಧರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಭಾರತೀಯ ಜನತಾ ಪಕ್ಷ ಮಾಡುತ್ತಿದೆ. ಬೈಂದೂರು ಮಂಡಲದ ವ್ಯಾಪ್ತಿಯ ಎಲ್ಲಾ ಮಹಾಶಕ್ತಿ ಕೇಂದ್ರಗಳಲ್ಲಿ ರಾಜ್ಯ ಮತ್ತು ಜಿಲ್ಲಾ ಬಿಜೆಪಿ ಸೂಚನೆಯಂತೆ ನಿವೃತ್ತ ಯೋಧರನ್ನು ಗೌರವಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದಾರೆ ಎಂದು ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಕರಣ್ ಪೂಜಾರಿ ಹೇಳಿದರು.
ಅವರು ಬಿಜೆಪಿ ಬೈಂದೂರು ಮಂಡಲ ವತಿಯಿಂದ ಗಂಗೊಳ್ಳಿಯಲ್ಲಿ ಗುರುವಾರ ನಡೆದ ನಿವೃತ್ತ ಯೋಧರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದೇ ಸಂದರ್ಭ ನಿವೃತ್ತ ವಾಯುಸೇನೆಯ ಯೋಧ ಟಿ. ದಿನಕರ ಶೆಣೈ ಅವರನ್ನು ಬಿಜೆಪಿ ಬೈಂದೂರು ಮಂಡಲ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಮಂಡಲ ಉಪಾಧ್ಯಕ್ಷರಾದ ಮಿಥುನ್ ಎಂ.ಡಿ.ಬಿಜೂರು, ಮಾಲತಿ ನಾಯಕ್, ನಾಗರತ್ನ, ಖಜಾಂಚಿ ಗಣೇಶ ಗಾಣಿಗ, ತ್ರಾಸಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರವೀಂದ್ರ ಖಾರ್ವಿ ಹೊಸಪೇಟೆ, ಯುವಮೋರ್ಚಾ ಪ್ರಮುಖ ಜಯಂತ ಶೇರುಗಾರ್, ಜಿಲ್ಲಾ ಒಬಿಸಿ ಮೋರ್ಚಾ ಕಾರ್ಯದರ್ಶಿ ಶಾಂತಿ ಖಾರ್ವಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

