Kundapra.com ಕುಂದಾಪ್ರ ಡಾಟ್ ಕಾಂ

ಐಎಂಜೆ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಂದ ಗುಲ್ವಾಡಿಯ ಪ್ರಭಾಕಿರಣ್ ಟೈಲ್ ವರ್ಕ್ಸ್ ಗೆ ಕೈಗಾರಿಕಾ ಭೇಟಿ ನೀಡಲಾಯಿತು.

ಸಂಸ್ಥೆಯು ವಿಸ್ತರಣಾ ಚಟುವಟಿಕೆ ಭಾಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ವಿದ್ಯಾರ್ಥಿಗಳು ಕೈಗಾರಿಕಾ ಪ್ರಕ್ರಿಯೆಗಳ ನೇರ ಅನುಭವ ಪಡೆದುಕೊಂಡರು.

ಟೈಲ್ಸ್ ಉತ್ಪಾದನಾ ಪ್ರಕ್ರಿಯೆ, ಉಪಕರಣಗಳ ಬಳಕೆ ಹಾಗೂ ನಿರ್ವಹಣೆಯ ಕುರಿತು ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಂಡರು. ಅಲ್ಲದೆ ಇದರಿಂದ ವಾಣಿಜ್ಯ ಜ್ಞಾನವನ್ನು ವಿಸ್ತರಿಸಿ ಕೊಳ್ಳುವುದರ ಮೂಲಕ ಕೈಗಾರಿಕಾ ಕ್ಷೇತ್ರದ ನೈಜ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡರು. 

ಕಾಲೇಜಿನ ಉಪ ಪ್ರಾಂಶುಪಾಲರಾದ ಜಯಶೀಲ್ ಕುಮಾರ್, ವಾಣಿಜ್ಯ ಮತ್ತು ಆಡಳಿತ ವಿಭಾಗದ ಮುಖ್ಯಸ್ಥರಾದ ಅರ್ಚನಾ ಉಪಾಧ್ಯ ಹಾಗೂ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ನಿಧಿ,  ಕಾರ್ಖಾನೆಯ ವ್ಯವಸ್ಥಾಪಕರಾದ ರಾಜು ಅವರು  ಉಪಸ್ಥಿತರಿದ್ದರು.

Exit mobile version