Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ ಜನತಾ ಪಿಯು ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ – ಜನತಾ ವಿರಾಟ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಹಳ್ಳಿಯ ಎಲ್ಲ ಮಕ್ಕಳಿಗೂ ಶಿಕ್ಷಣ ಸಿಗಬೇಕು. ಆಗ ಮಾತ್ರ ಗಾಂಧಿ ಕಂಡ ಕನಸ್ಸು ಸಾರ್ಥಕತೆ ಪಡೆಯುತ್ತದೆ.ಹಳ್ಳಿಯ ಪ್ರತಿ ಮಗು ಸಮಾಜದ ಮುಖ್ಯ ವಾಹಿನಿಗೆ ಬರಲು ನಾವೆಲ್ಲಾ ಶ್ರಮಿಸಬೇಕು. ವಿದ್ಯಾರ್ಥಿಗಳು ಕೂಡ ವೀರ ಯೋಧರ ತ್ಯಾಗ ಸ್ಮರಿಸಿ ಅವರ ಆದರ್ಶ ಗಳನ್ನುತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಹೇಳಿದರು.

ಅವರು ಹೆಮ್ಮಾಡಿಯ ಜನತಾ ಪಿಯು ಕಾಲೇಜು ಹಾಗೂ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಸ್ಕೂಲ್ ಇವರ ಆಸರೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್ ಕಾರ್ಯಕ್ರಮದಲ್ಲಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಬೆಳಿಗ್ಗೆ ನಡೆದ ದ್ವಜಾರೋಹಣ ಕಾರ್ಯಕ್ರಮದಲ್ಲಿ ವಿವಿವಿ ಮಂಡಳಿಯ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ  ಗೋಪಾಲ ಪೂಜಾರಿ ಅವರು  ಧ್ವಜಾರೋಹಣಗೈದು ದೇಶ ಭಕ್ತಿ, ದೇಶ ಪ್ರೇಮ ಬೆಳಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸಾಧಕರಿಗೆ ಸನ್ಮಾನ:
ಕಾರ್ಯಕ್ರಮದಲ್ಲಿ  ನಿವೃತ್ತ ಯೋಧರಾದ ಚಂದ್ರಶೇಖರ ನಾವುಡ, ಪ್ರಗತಿ ಪರ ಕೃಷಿಕರಾದ ಬಾಬು ಆಚಾರ್ಯ ಹೇರೂರು, ಜನತಾ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಮಂಜು ಕಾಳವರ, ಸಮಾಜ ಸೇವಕ ಬೆಂಕಿಮಣಿ ಸಂತು ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಜನತಾ ಪ್ರೌಢ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಜಗದೀಶ್ ಶೆಟ್ಟಿ, ಪ್ರಗತಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್ ಉಪಸ್ಥಿತರಿದ್ದರು.

ಉಪಪ್ರಾಂಶುಪಾಲ ರಮೇಶ್ ಪೂಜಾರಿ ಸ್ವಾಗತಿಸಿ, ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ವಂದಿಸಿದರು. ನಂತರ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Exit mobile version