Site icon Kundapra.com ಕುಂದಾಪ್ರ ಡಾಟ್ ಕಾಂ

ಮುಂದವರಿದ ಮಳೆ – ಅ.19ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ರಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಅ.18:
ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗಸ್ಟ್ 19ರಂದು ಅಂಗನವಾಡಿ,‌ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪಿಯುಸಿ ಮತ್ತು ಐಟಿಐ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ.

ಉಳಿದಂತೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Exit mobile version