Site icon Kundapra.com ಕುಂದಾಪ್ರ ಡಾಟ್ ಕಾಂ

ಕರಾಟೆ ಸ್ಪರ್ಧೆಯಲ್ಲಿ ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೀತೇಶ್ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶಾಲಾ ಶಿಕ್ಷಣ ಇಲಾಖೆ ಹಾಗೂ  ಸೇಂಟ್ ಫ್ರಾನ್ಸಿಸ್  ಕ್ಸೆವಿಯರ್  ಇಂಗ್ಲಿಷ್ ಮೀಡಿಯಂ  ಶಾಲೆ ಉದ್ಯಾವರ ಇವರ ಸಹಭಾಗಿತ್ವದಲ್ಲಿ  ನಡೆದ  ಜಿಲ್ಲಾಮಟ್ಟದ  ಕರಾಟೆ  ಸ್ಪರ್ಧೆಯಲ್ಲಿ ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಪ್ರೀತೇಶ್ 14ರ ವಯೋಮಾನದ ಬಾಲಕರ 25 ಕೆ.ಜಿ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗೆ ಸಾಧನೆಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಗಾಯತ್ರಿ ಮತ್ತು ಕರಾಟೆ ತರಬೇತುದಾರರಾದ ಅಫ್ಜಲ್ ಇವರು ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಯ ಸಾಧನೆಗೆ ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಕಾರ್ಯದರ್ಶಿ ನವೀನ್ ಕುಮಾರ್ ಶೆಟ್ಟಿ, ಖಜಾಂಚಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ನಿರ್ದೇಶಕರು ಹಾಗೂ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Exit mobile version