Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಮೀನುಗಾರಿಕಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಟಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಲಾಗಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಟಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಘಟಕಗಳ ವಿವರ:
ಪಚ್ಚಿಲೆ ಕೃಷಿ (ಮಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲಾಂಟ್ / ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ ನೀಡಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version