ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂಗಳೂರಿನ ಕಿಂಗ್ಸ್ ಚೆಸ್ ಅಕಾಡೆಮಿಯವರು ನಡೆಸಿದ 11ನೇ ರಾಷ್ಟ್ರ ಮಟ್ಟದ ರ್‍ಯಾಪಿಡ್ ಚೆಸ್ ಸ್ಪರ್ಧೆಯಲ್ಲಿ 7ರ ವಯೋಮಾನದ ವಿಭಾಗದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ 2ನೇ ತರಗತಿ ವಿದ್ಯಾರ್ಥಿ ಪ್ರಮುಖ ಬಿ. ಪೂಜಾರಿ 6ರಲ್ಲಿ6 ಪಂದ್ಯವನ್ನು ಗೆದ್ದು ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ .
ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ/ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

