Site icon Kundapra.com ಕುಂದಾಪ್ರ ಡಾಟ್ ಕಾಂ

ಮೂಡ್ಲಕಟ್ಟೆ ಕಾಲೇಜಿನಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಮತ್ತು ಮಾದರಿ ಪ್ರದರ್ಶನ ಆಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಐಟಿ ಮತ್ತು ಕೋಡಿಂಗ್ ಕ್ಲಬ್ ಆಶ್ರಯದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಮತ್ತು ಮಾದರಿ ಪ್ರದರ್ಶನ ಆಚರಿಸಲಾಯಿತು.

ಬಾಹ್ಯಾಕಾಶ ವಿಜ್ಞಾನಕ್ಕೆ ಸಂಬಂದಿಸಿದ ನವೀನ ಮಾದರಿಗಳ ಪ್ರದರ್ಶನ ಜರುಗಿತು.

ಈ ಮೂಲಕ ವಿದ್ಯಾರ್ಥಿಗಳು ಬಾಹ್ಯಾಕಾಶ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯವನ್ನು  ಅನ್ವೇಷಿಸಲು  ಪ್ರದರ್ಶನವು ಸೃಜನಶೀಲ ವೇದಿಕೆಯಾಗಿ ಕಾರ್ಯ ನಿರ್ವಹಿಸಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಮೂಡ್ಲಕಟ್ಟೆ ಎಂಐಟಿಯ ಡೇಟಾ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಕಾರ್ತಿಕೇಯನ್ ಕಾರ್ಯಕ್ರಮವನ್ನು  ಉದ್ಘಾಟಿಸಿದರು ಮತ್ತು ಕಾರ್ಯಕ್ರಮದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದರು.

ಬಿಸಿಎ ವಿಭಾಗದ ಮುಖ್ಯಸ್ಥರು ಮತ್ತು ಐಟಿ ಮತ್ತು ಕೋಡಿಂಗ್ ಕ್ಲಬ್ ನ  ಸಂಯೋಜಕರಾದ ಸ್ವರ್ಣ ರಾಣಿ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್, ವಿದ್ಯಾರ್ಥಿ ಸಂಯೋಜಕರಾದ ತೃತೀಯ ಬಿಸಿಎ ವಿದ್ಯಾರ್ಥಿಗಳಾದ ಅಶ್ವಿನ್ ಎ .ಜೆ ಮತ್ತು ತೀರ್ಥ ಕುಲಾಲ್ ಉಪಸ್ಥಿತರಿದ್ದರು.

Exit mobile version