Site icon Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜು: ಪ್ರಥಮ ಚಿಕಿತ್ಸೆ ಕಾರ್ಯಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಮತ್ತು ಯುವ ರೆಡ್ ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಕಾರ್ಯಗಾರ ಇತ್ತೀಚಿಗೆ ನಡೆಯಿತು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕಾಧ್ಯಕ್ಷರಾದ ಎಸ್. ಜಯಕರ ಶೆಟ್ಟಿ ಅವರು ರೆಡ್‌ಕ್ರಾಸ್ ಸಂಸ್ಥೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಯುವ ಜನತೆ ಆರೋಗ್ಯದ ಬಗ್ಗೆ ಗಮನ ವಹಿಸುವುದು, ಅಪಘಾತ ಮತ್ತು ಇತರೆ ತುರ್ತು ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳವುದರಿಂದ ಉತ್ತಮ ಸಮಾಜ ನಿರ್ಮಾಣದಲ್ಲಿ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಾ. ಸೋನಿ ಡಿಕೋಸ್ಟ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ವಿದ್ಯಾರ್ಥಿಗಳಿಗೆ ಹಾವು ಕಚ್ಚಿದಾಗ, ಬೆಂಕಿ ಅಪಘಾತವಾದಾಗ ಹಾಗೂ ಹೃದಯಘಾತವಾದಾಗ ಯಾವ ರೀತಿ ಪ್ರಥಮ ಚಿಕಿತ್ಸೆ ಕೊಡಬೇಕೆಂದು ವಿದ್ಯಾರ್ಥಿಗಳಿಗೆ ಮಾದರಿಯ ಮುಖಾಂತರ ತಿಳಿಸಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ನಾಗರಾಜ ವೈದ್ಯ ಎಂ., ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು, ಡಾ. ಶೇಖರ ಬಿ. ವಾಣಿಜ್ಯಶಾಸ್ತ್ರ ಮುಖ್ಯಸ್ಥರು, ವಿದ್ಯಾರ್ಥಿ ಪ್ರತಿನಿಧಿ ಆಕಾಶ್ ಹಾಗೂ ರೆಡ್‌ಕ್ರಾಸ್ ಸಮಿತಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  ಯುವ ರೆಡ್ ಕ್ರಾಸ್ ಘಟಕ ಸಂಚಾಲಕ ಡಾ. ಚೇತನಾ ಎಂ. ಅವರು ಅತಿಥಿಗಳನ್ನು ಸ್ವಾಗತಿಸಿ, ಸಂಯೋಜಿಸಿದರು. ರಾಜ್ಯಶಾಸ್ತ್ರ ವಿಭಾಗದ ರೋಹಿಣಿ ವಂದಿಸಿದರು.

Exit mobile version