Site icon Kundapra.com ಕುಂದಾಪ್ರ ಡಾಟ್ ಕಾಂ

ಮೂಡ್ಲಕಟ್ಟೆ: ಮಾದಕ ದ್ರವ್ಯ ಜಾಗೃತಿ ಸಭೆ ಮತ್ತು ಪ್ರತಿಜ್ಞೆ ಸ್ವೀಕಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್, ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು, ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ಸೈನ್ಸಸ್ ಇನ್ಸ್ಟಿಟ್ಯೂಟ್ ಮತ್ತು ಮೂಡ್ಲಕಟ್ಟೆ ಕಾಲೇಜ್ ಆಫ್ ಫಿಸಿಯೋತೆರೇಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಸಭೆ ಮತ್ತು ಪ್ರತಿಜ್ಞೆ ಸ್ವೀಕಾರ ಆಯೋಜಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾದ ಕುಂದಾಪುರ ರೂರಲ್ ಪೊಲೀಸ್ ಸ್ಟೇಷನ್ ಸಬ್ ಇನ್ಸ್ಪೆಕ್ಟರ್ ಭೀಮಶಂಕರ್ ಸಿನ್ನೂರ ಕಂಡ್ಲೂರು, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನೆಜಸ್ ಹಾಗೂ ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ. ಎಸ್. , ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಇನ್ಸ್ಟಿಟ್ಯೂಟ್‌ನ ಡೀನ್ ಡಾ. ಪದ್ಮಚರಣ ಸ್ವೈನ್,  ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಹಾಗೂ ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ಇನ್ಸ್ಟಿಟ್ಯೂಟ್‌ನ ಉಪಪ್ರಾಂಶುಪಾಲರಾದ ಸೌಜನ್ಯಾ ಅವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕುಂದಾಪುರ ರೂರಲ್ ಪೊಲೀಸ್ ಸ್ಟೇಷನ್ ಸಬ್ ಇನ್ಸ್ಪೆಕ್ಟರ್ ಭೀಮಶಂಕರ್ ಸಿನ್ನೂರ ಕಂಡ್ಲೂರು ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಪ್ರೊಫೆಸರ್ ಜೆನ್ನಿಫರ್ ಫ್ರೀಡಾ ಮೆನೆಜಸ್ ಅವರು ಆಂಟಿ ಡ್ರಗ್ ಕಮಿಟಿಯ ಪ್ರಾಮುಖ್ಯತೆಯನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಡಾ. ಪದ್ಮಚರಣ ಸ್ವೈನ್ ಅವರು ಆಂಟಿ ಡ್ರಗ್ ಕಮಿಟಿಯ ಮಹತ್ವವನ್ನು ವಿವರಿಸಿದರು. ರೂಪಶ್ರೀ ಕೆ. ಎಸ್ ಪ್ರತಿಜ್ಞಾ ವಿಧಯನ್ನು ನೀಡಿದರು.

ಉಪನ್ಯಾಸಕಿಯರಾದ ಸುಷ್ಮಾ ಕಾರ್ಯಕ್ರಮವನ್ನು ನಿರೂಪಿಸಿ, ಕೀರ್ತನ  ಸ್ವಾಗತ ಕೋರಿದರು ಹಾಗೂ ದೀಪಿಕಾ ಧನ್ಯವಾದ ಅರ್ಪಿಸಿದರು.

Exit mobile version