ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಮ್ಮ ಗುರಿಯಲ್ಲಿ ಸ್ಪಷ್ಟತೆ, ಅದನ್ನು ಕಾರ್ಯಪ್ರವೃತ್ತವಾಗಿಸುವ ಆತ್ಮವಿಶ್ವಾಸ ಮತ್ತು ಹಂತ ಹಂತದ ಪರೀಕ್ಷೆಗಳಲ್ಲಿ ಯಶಸ್ಸು ಸಿಕ್ಕಿದಾಗ ಮುಂದಿನ ತಯಾರಿ- ಇಂಥ ಸರಳ ಗುಣಗಳನ್ನು ಕಲಿತರೆ ಸಿಎ ಮತ್ತು ಸಿಎಸ್ ಸಂಬಂಧಿತ ಕೋರ್ಸ್‌ಗಳನ್ನು ಮಾಡಲು ಸುಲಭವಾಗುತ್ತದೆ ಎಂದು ಉಡುಪಿಯ ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್‌ನ ತರಬೇತುದಾರರಾದ ಅಲ್ಬನ್ ಹೇಳಿದರು.
ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಅಯೋಜಿಸಿದ ಸಿಎ ಮತ್ತು ಸಿಎಸ್ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ತಿಳಿಸಿದರು.
ತ್ರಿಷಾ ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿಯಾದ ಜಯದೀಪ್ ಪ್ರಭಾಕರ್ ಅಮೀನ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ದೀಪಾ ಶೆಟ್ಟಿ ಅವರು ಧನ್ಯವಾದ ಸಲ್ಲಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಸುಷ್ಮಾ ಶೆಣೈ ಕಾರ್ಯಕ್ರಮ ನಿರ್ವಹಿಸಿದರು.

