ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ 13 ಫಲಾನುಭವಿ ಆಧಾರಿತ ಯೋಜನೆಗಳಾದ ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ ಮತ್ತು ಅಂಧ ಮಹಿಳೆಗಾಗಿ ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೆಜಿಲ್‌ಕಿಟ್ ಯೋಜನೆ ಹಾಗೂ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿಚಾಲಿತ ವೀಲ್‌ಚೇರ್‌ಗಳ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಆನ್‌ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ನೇರವಾಗಿ https://sevasindhu.karnataka.gov.in/ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
