ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಗುಜ್ಜಾಡಿ ಗ್ರಾಮದ ಕೊಡಪಾಡಿಯ ಮಾರಿಕಾಂಬಾ ಮಹಿಳಾ ಸಹಕಾರ ಸಂಘ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ತ್ರಾಸಿಯ ಅಂಬೇಡ್ಕರ್ ಸಭಾ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆನಾಂಡಿಸ್ ಮಾತನಾಡಿ, ಮಹಿಳೆಯರ ಅಭಿವೃದ್ಧಿ ಹೊಂದಲು ಕ್ರಿಯಾಶೀಲವಾಗಿ ಪ್ರಯತ್ನಿಸಬೇಕು ಹಾಗೂ ಸ್ವ-ಉದ್ಯೋಗವನ್ನು ಮಾಡಬೇಕು. ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಸಕ್ರಿಯವಾಗಿ ಭಾಗವಹಿಸಿದರೆ ಸಂಘ ಸಂಸ್ಥೆಗಳನ್ನು ಲಾಭದಾಯಕಗೊಳಿಸಲು ಸಾಧ್ಯ ಎಂದು ಹೇಳಿದರು.
ಸಂಘದ ನಿರ್ದೇಶಕರುಗಳಾದ ರತ್ನ ಟಿ. ದೇವಾಡಿಗ, ಸುರೇಖಾ ಕಾನೋಜಿ, ಮಹಾಲಕ್ಷ್ಮೀ, ಶಾಂತ, ಜಿ. ರೇಣುಕಾ, ವಿಜಯಾ ಬಿ., ಲಲಿತಾ ಖಾರ್ವಿ, ಶ್ಯಾಮಲಾದೇವಿ, ಸುನೀತಾ ಪೂಜಾರಿ, ಶಾಂತ ಮರಾಠಿ ನಾಯ್ಕ ಉಪಸ್ಥಿತರಿದ್ದರು.
2024-25ನೇ ಸಾಲಿನನಲ್ಲಿ ಎಸ್ ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಆತ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಶೈಕ್ಷಣಿಕ ಪೋತ್ಸಾಹಧನ ನೀಡಿ ಗೌರವಿಸಲಾಯಿತು.
ಸಂಘದ ಸಿಬ್ಬಂದಿ ಶ್ರೀಲವಿ ರವರು ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾಮಿಲಿಂಗೇಶ್ವರ್ ಅವರು ವಾರ್ಷಿಕ ವರದಿ ಮಂಡಿಸಿದರು. ನಿರ್ದೇಶಕಿ ರೇಖಾ ಖಾರ್ವಿ ವಂದಿಸಿದರು.
ಪೋಟೋ ಪೈಲ್ ನೇಮ್ : ೨೮ಜಿಎಎನ್೨೧ (ಕೊಡಪಾಡಿಯ ಮಾರಿಕಾಂಬಾ ಮಹಿಳಾ ಸಹಕಾರ ಸಂಘ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ತ್ರಾಸಿಯ ಅಂಬೇಡ್ಕರ್ ಸಭಾ ಭವನದಲ್ಲಿ ನಡೆಯಿತು)

