ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಸಿ.ಬಿ.ಎಸ್.ಇ. ಹಾಗೂ ಐ.ಸಿ.ಎಸ್.ಇ. ಶಾಲೆಗಳ ಜಂಟಿ ಆಶ್ರಯದಲ್ಲಿ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿಯಲ್ಲಿ ನಡೆದ ರಾಗ್-ರಂಗ್ 2025 ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ “ಟ್ರಾಶ್ ಟು ಟ್ರೆಜರ್ ಫ್ಯಾನ್ಸಿ ಡ್ರೆಸ್” ಸ್ಪರ್ಧೆಯಲ್ಲಿ ತೆಕ್ಕೆಟ್ಟೆಯ ವಿಶ್ವವಿನಾಯಕ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಹರ್ಷಿಣಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
ಅವರಿಗೆ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ್ ಶೆಟ್ಟಿ ಅವರು ಬಹುಮಾನ ವಿತರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ’ ಆಲ್ಮೇಡಾ, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

