Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ, ಭಂಡಾರ್ಕಾರ್ಸ್ ಪದವಿ ಕಾಲೇಜು ಮತ್ತು ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಇವರು ಸಹಯೋಗದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪಿ.ಯು ಅಂತರ್ ಕಾಲೇಜು ಬಾಲಕ- ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ 2025-26 ಉದ್ಘಾಟನಾ ಸಮಾರಂಭವು ಇತ್ತೀಚಿಗೆ ನಡೆಯಿತು.

ಕಾರ್ಯಕ್ರಮವನ್ನು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಟಿ. ಸೋನ್ಸ್ ಉದ್ಘಾಟಿಸಿದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಮ್. ಗೊಂಡ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಅಧ್ಯಕ್ಷ ಗುರುರಾಜ್ ಕೊತ್ವಾಲ್, ರಾಷ್ಟ್ರ ಮಟ್ಟದ ಬ್ಯಾಡ್ಮಿಂಟನ್ ಆಟಗಾರ ಹರೀಶ್ ಕಾಮತ್, ಪಿ.ಯು ದೈಹಿಕ ನಿರ್ದೇಶಕರುಗಳ ಸಂಘ ಇದರ ಅಧ್ಯಕ್ಷರಾದ ಸತೀಶ್ ಹೆಗ್ಡೆ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕಿ ರೇಣುಕಾ ಕಾರ್ಯಕ್ರಮ ನಿರೂಪಿಸಿ, ಭಂಡಾರ್ಕಾರ್ಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶಂಕರನಾರಾಯಣ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕಿ ವನಿತಾ ವಂದಿಸಿದರು.

ಅಂತಿಮ ಪಂದ್ಯದಲ್ಲಿ ಬಾಲಕಿಯರ ವಿಭಾಗದಲ್ಲಿ ಭುವನೇಂದ್ರ ಪದವಿ ಪೂರ್ವ ಕಾಲೇಜು, ಕಾರ್ಕಳ ಪ್ರಥಮ ಸ್ಥಾನ ಪಡೆದು ಜಯ ಗಳಿಸಿದರು. ಮಹಾತ್ಮ ಗಾಂಧಿ ಪದವಿ ಪೂರ್ವ ಕಾಲೇಜು, ಉಡುಪಿ ದ್ವಿತೀಯ ಸ್ಥಾನ ಪಡೆದರು. ಬಾಲಕರ ವಿಭಾಗದಲ್ಲಿ ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ, ಪ್ರಥಮ ಸ್ಥಾನ ಪಡೆದರು.

Exit mobile version