Site icon Kundapra.com ಕುಂದಾಪ್ರ ಡಾಟ್ ಕಾಂ

ಚಕ್ರ ಎಸೆತದಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ಸಾಕ್ಷತ್ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ದ್ವಿತೀಯ ಬಿ.ಎಸ್.ಸಿ ವಿದ್ಯಾರ್ಥಿ ಸಾಕ್ಷತ್ ಶೆಟ್ಟಿ ಅವರು ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗೀಯ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲಾ ಅಮೇಚ್ಯೂರ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಚಕ್ರ ಎಸೆತ ಮತ್ತು ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದ್ವಿತೀಯ ಬಿ.ಎಸ್.ಸಿ ವಿದ್ಯಾರ್ಥಿ ಕಾರ್ತಿಕ್ ಅವರು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾ ಮಟ್ಟದ ಮಾನ್ಸೂನ್ ಚೆಸ್  ಟೂರ್ನಾಮೆಂಟ್ ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ದ್ವಿತೀಯ ಬಿ.ಕಾಮ್ ವಿದ್ಯಾರ್ಥಿನಿ ಶಿವಾನಿ ಅವರು ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕುಸ್ತಿ (75ಕೆ.ಜಿ ಕೆಟಗೆರಿ) ಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗೀಯ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ವಿಶ್ವಸ್ಥ ಮಂಡಳಿ ಆಡಳಿತ ಮಂಡಳಿ ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನೆ ತಿಳಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Exit mobile version