Site icon Kundapra.com ಕುಂದಾಪ್ರ ಡಾಟ್ ಕಾಂ

ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ: 
ದಕ್ಷಿಣ ಭಾರತದ ಕರಾಟೆ ಚಾಂಪಿಯನ್‌ಶಿಪ್ ಕೋರಮಂಗಲದ ಒಳಾಂಗಣ ಕ್ರೀಡಾಂಗಣ ಬೆಂಗಳೂರಿನಲ್ಲಿ ಆಯೋಜನೆ ಗೊಂಡಿತ್ತು. 

ಸೌತ್ ಝೋನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ಕುಮಾರ್ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿದ್ಯಾರ್ಥಿಯ  ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.

Exit mobile version