Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಓಣಂ ಸಂಭ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ದೀಪ ಬೆಳಗಿಸಿ ಶುಭ ಹಾರೈಸಿದರು.

ಇದೇ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ, ಸಹಾಯಕ ಪ್ರಾಧ್ಯಾಪಕಿ ರೇವತಿ ಡಿ. ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.

Exit mobile version