ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ ಅಬ್ದುಲ್ ಮಲ್ಲಿಕ್, ಆ.30 ಮತ್ತು 31, ರಂದು ದಕ್ಷಿಣ ಭಾರತ ಕರಾಟೆ ಫೆಡರೇಶನ್ ಅವರು ಬೆಂಗಳೂರಿನಲ್ಲಿ ಆಯೋಜಿಸಿದ್ದ ನಾಲ್ಕನೇ ದಕ್ಷಿಣ ಭಾರತ ವಲಯ ಕರಾಟೆ ಚಾಂಪಿಯನ್‌ಶಿಪ್ 2025ರ ಕುಮಿಟೆ 67 ಕೆಜಿ, 21 ವರ್ಷದೊಳಗಿನ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಶುಭ ಶುಭ ಹಾರೈಸಿದ್ದಾರೆ

