ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ ಪ್ರಕರಣದಲ್ಲಿ ನೀಡಿರುವ ನಿರ್ದೇಶನ ಅನ್ವಯ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆ, ಕೋಚಿಂಗ್ ಕೇಂದ್ರ ಮತ್ತು ತರಬೇತಿ ಕೇಂದ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಖಾತ್ರಿಪಡಿಸುವ ನೀತಿಗಳು, ಮಾನಸಿಕ ಬೆಂಬಲ, ಸುರಕ್ಷಿತ ವಾತಾವರಣ ಮತ್ತು ತಾರತಮ್ಮ ರಹಿತ ಶಿಕ್ಷಣ ನೀಡುವ ಕುರಿತು ಏಕರೂಪದ ಮಾನಸಿಕ ಆರೋಗ್ಯ ನೀತಿ’ ಯನ್ನು ಜಾರಿಗೊಳಿಸಿ, ಅನುಷ್ಠಾನಗೊಳಿಸಬೇಕಾಗಿರುತ್ತದೆ.
ಈ ಹಿನ್ನಲೆ, ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಕೋಚಿಂಗ್ ಕೇಂದ್ರಗಳು The Karnataka Tutorial Institutions (Registration and Regulation) Rules, 2001 ರನ್ವಯ ಕಡ್ಡಾಯವಾಗಿ 30 ದಿನಗಳೊಳಗಾಗಿ ತಮ್ಮ ಕೋಚಿಂಗ್ ಕೇಂದ್ರಗಳು ಕಾರ್ಯಾಚರಿಸುತ್ತಿರುವ ಬಗ್ಗೆ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಣಿಪಾಲ, ಉಡುಪಿ ಇವರಲ್ಲಿ ನೊಂದಣಿ ಮಾಡಿಕೊಳ್ಳಬೇಕು. ತಪ್ಪಿದ್ದಲ್ಲಿ ನೊಂದಣಿ ಮಾಡಿಸದೇ ಇರುವಂತಹ ಕೋಚಿಂಗ್ ಕೇಂದ್ರಗಳನ್ನು ಸ್ಥಗಿತಗೊಳಿಸಲು ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

