ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮೆಡಿಕೋಸ್ ಸಂಸ್ಥೆಯ ಸಹಯೋಗದಲ್ಲಿ “ಹದಿಹರೆಯದ ಸಮಸ್ಯೆಗಳು ಮತ್ತು ಪರಿಹಾರಗಳು” ಕುರಿತು ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಕೋಟೆಶ್ವರದ ಎನ್.ಆರ್.ಆಸ್ಪತ್ರೆಯ ಮನೋವೈದ್ಯರಾದ ಡಾ. ಮಹಿಮಾ ಆಚಾರ್ಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.
ವೇದಿಕೆಯಲ್ಲಿ ಕುಂದಾಪುರದ ನ್ಯೂ ಮೆಡಿಕಲ್ ಆಸ್ಪತ್ರೆಯ ಕಣ್ಣು ತಜ್ಞ ಡಾ. ಶ್ರೀಕಾಂತ್ ಶೆಟ್ಟಿ, ರಾಷ್ಟ್ರೀಯ ಮೆಡಿಕೋಸ್ ಸಂಸ್ಥೆಯ ಸಂಯೋಜಕರಾದ ವಸಂತ ಉಡುಪ ಮತ್ತು ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ರಾಜೇಶ್ ಕಾವೇರಿ ಉಪಸ್ಥಿತರಿದ್ದರು.
ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸರೋಜಾ ಎಮ್ ಸ್ವಾಗತಿಸಿದರು. ಉಪನ್ಯಾಸಕ ವಿದ್ಯಾಧರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

