Site icon Kundapra.com ಕುಂದಾಪ್ರ ಡಾಟ್ ಕಾಂ

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ಕ್‌ನಲ್ಲಿ ಶಿಕ್ಷಕರ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ತೆಕ್ಕೆಟ್ಟೆಯ ವಿಶ್ವವಿನಾಯಕ ಸಿಬಿಎಸ್‌ಇ ಸ್ಕೂಲ್‌ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು.

ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಡಾ. ಸರ್ವಪಲ್ಲಿ ರಾಧಾ ಕೃಷ್ಣನ್‌ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು, ಶಿಕ್ಷಕರ ಜವಾಬ್ದಾರಿಯುತ ಸೇವೆ ಉತ್ತಮ ಸಮಾಜ ನಿರ್ಮಾಣಕ್ಕೆ ಮೂಲವಾಗಿದೆ ಎಂದು ತಿಳಿಸಿದರು.

ಪ್ರಾಂಶುಪಾಲರಾದ ನಿತಿನ್ ಡಿ’ ಆಲ್ಮೇಡಾ ಅವರು ಮಾತನಾಡಿ, ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು, ವಿದ್ಯಾರ್ಥಿಗಳು ಗುರುಹಿರಿಯರ ಮಾರ್ಗದರ್ಶನದಲ್ಲಿ ನಡೆದು ಸತ್ಪ್ರಜೆಗಳಾಗಿ ದೇಶ ನಿರ್ಮಾಣ ಮಾಡುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. 

ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

ಶಿಕ್ಷಕಿಯರಾದ ನಂದಿನಿ, ರಜನಿ ಹಾಗೂ ಶ್ವೇತಾ ಕಾರ್ಯಕ್ರಮ ಸಂಘಟಿಸಿದರು. ವಿದ್ಯಾರ್ಥಿಗಳಾದ ನವಮಿ ಸ್ವಾಗತಿಸಿ,  ಬಿಂದುಶ್ರೀ ಕಾರ್ಯಕ್ರಮ ನಿರೂಪಿಸಿ, ಮಿರ್ಥುಲಾ ವಂದಿಸಿದರು.

Exit mobile version