ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕುಂದಾಪುರ ಹಾಗೂ ನೇತಾಜಿ ಸರ್ಕಾರಿ ಪ್ರೌಢಶಾಲೆ ಕಾಳಾವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 14ರ ವಯೋಮಿತಿಯ ವಿಭಾಗದಲ್ಲಿ ಎಸ್ ವಿ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಅವರಿಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದರು.

