Kundapra.com ಕುಂದಾಪ್ರ ಡಾಟ್ ಕಾಂ

ಅಖಿಲ ಭಾರತ ರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿನಿ ಆರ್ಯಶ್ರೀಗೆ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಪ್ರಥಮ ಬಿ.ಎಸ್.ಸಿ. ವಿದ್ಯಾರ್ಥಿನಿ ಆರ್ಯಶ್ರೀ ಅವರು ಸೆಪ್ಟೆಂಬರ್ 3 ಮತ್ತು 4 ರಂದು ಗೋವಾದಲ್ಲಿ ಇಂಡಿಯಾಸ್ ಟರ್ನ್ಸ್ ಮತ್ತು ಟ್ವಿರ್ಲ್ಸ್ ಅವರು ನಡೆಸಿದ  ಸೀಸನ್ -1 ಅಖಿಲ ಭಾರತ ರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ  ರಾಷ್ಟ್ರೀಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಅವರಿಗೆ ಕಾಲೇಜಿನ ವಿಶ್ವಸ್ಥ ಮಂಡಳಿ, ಆಡಳಿತ ಮಂಡಳಿ, ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version