Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ, ಬೈಂದೂರಿನ ವಿವಿಧ ಚರ್ಚ್‌ಗಳಲ್ಲಿ ಸಂಭ್ರಮದ ಮೊಂತಿ ಫೆಸ್ತ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕ್ರೈಸ್ತ ಭಾಂದವರು ತಮ್ಮ ಚರ್ಚುಗಳಲ್ಲಿ ಕ್ರೈಸ್ತರ ಪವಿತ್ರ ಹಬ್ಬವಾದ ಮೊಂತಿಫೆಸ್ತ್ ( ತೆನೆ ಹಬ್ಬ ) ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಕುಂದಾಪುರ, ಬಸ್ರೂರು, ತಲ್ಲೂರು, ನಾಡ, ತ್ರಾಸಿ, ಬೈಂದೂರು ಸೇರಿದಂತೆ 11 ಚರ್ಚ್ ಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆಗಳು ನೆರವೇರಿದವು.

ಕುಂದಾಪುರದಲ್ಲಿ ರೋಜಾರಿ ಅಮ್ಮನವರ ಇಗರ್ಜಿಯಲ್ಲಿ ಮಾತೆ ಮೇರಿಯ ಮೊಂತಿ ಫೆಸ್ತ್ ಹುಟ್ಟು ಹಬ್ಬವನ್ನು ಬಹಳ ಶ್ರದ್ದಾಭಕ್ತಿ ಗೌರವ ಹಾಗೂ ವಿಜ್ರಂಭಣೆಯಿಂದ ಆಚರಿಸಲಾಯಿತು. ಚಿಕ್ಕ ಮಕ್ಕಳು ಬಾಲಾ ಮೇರಿ ಮಾತೆಗೆ ಪುಷ್ಪಗಳನ್ನು ಅರ್ಪಿಸುವ ಮೂಲಕ ಹಬ್ಬಕ್ಕೆ ಚಾಲನೆಯನ್ನು ನೀಡಿದರು.

ಬೈಂದೂರಿನ ಹೋಲಿಕ್ರಾಸ್‌ ಚರ್ಚಿನಲ್ಲಿ ತೆನೆ ಹಬ್ಬ ಮೊಂತಿ ಫೆಸ್ತ್ ನ್ನು ಉಡುಪಿಯ  ರೆ. ಫಾ. ಅಶ್ವಿನ್‌ ಆರಾನ್ಹಾ , ಚರ್ಚಿನ ಧರ್ಮಗುರು ರೆ.ಫಾ. ವಿನ್ಸೆಂಟ್‌ ಕುವೆಲ್ಲೊ ಮತ್ತು ಬ್ರದರ್‌‌ ಪ್ರಥ್ವಿ ರೊಡ್ರಿಗಸ್ ರವರ ನೇತೃತ್ವದಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು

Exit mobile version