Site icon Kundapra.com ಕುಂದಾಪ್ರ ಡಾಟ್ ಕಾಂ

ಪಡುಕರೆ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಆರೋಗ್ಯ ತಪಾಸಣೆ ಶಿಬಿರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ನೇತೃತ್ವದಲ್ಲಿ ಕೋಟ ಸಮುದಾಯ ಆರೋಗ್ಯ ಕೇಂದ್ರ ಸಹಕಾರದಲ್ಲಿ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಣೂರು ಪಡುಕರೆಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಮಣೂರು ಸಮುಚ್ಚಯ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಯಿತು.

ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ. ಕುಂದರ್ ಅವರು ಶಿಬಿರವನ್ನು ಉದ್ಘಾಟಿಸಿ, ಶಿಕ್ಷಕರು ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವವರು ಅವರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ ಎಂದು ಹೇಳಿದರು.

ಶಿಕ್ಷಕರು ಹಾಗೂ ಶಿಕ್ಷಕೇತರರು  ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡರು. ಭಾಗವಹಿಸಿದ ಎಲ್ಲಾ ಶಿಬರಾರ್ಥಿಗಳಿಗೆ ಅಮೂಲ್ಯವಾದ ರಕ್ತಚಂದನ ಗಿಡ ಮತ್ತು ಬಟ್ಟೆ ಚೀಲಗಳನ್ನು ನೀಡಲಾಯಿತು.

ಶಿಬಿರದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ್, ಪದವಿ  ಪೂರ್ವ ಕಾಲೇಜು ಪ್ರಾಂಶುಪಾಲರಾದ ಡೆನ್ನಿಸ್ ಬಾಂಜಿ, ಪ್ರೌಢ ಶಾಲಾ ಹಿರಿಯ ಶಿಕ್ಷಕರಾದ ರಾಮದಾಸ್ ನಾಯಕ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಮಂಜುನಾಥ್ ಹೊಳ್ಳ, ಹೈ ಸ್ಕೂಲ್ ಎಸ್ ಡಿ ಎಂ ಸಿ ಅಧ್ಯಕ್ಷರಾದ ನಾಗರಾಜ್,  ಮತ್ತು ಗೀತಾನಂದ ಸಂಸ್ಥೆಯ ಸಂಯೋಜಕರೂಗಳಾದ ರವಿಕಿರಣ್ ನಿರೂಪಿಸಿ  ದೀಕ್ಷಿತಾ ಸಹಕರಿಸಿದರು.

Exit mobile version