Site icon Kundapra.com ಕುಂದಾಪ್ರ ಡಾಟ್ ಕಾಂ

ಸಾಲಿಗ್ರಾಮ: ಗೆಳೆಯರ ಬಳಗ ಕಾರಂತ ಪುರಸ್ಕಾರಕ್ಕೆ ಸಾಹಿತಿ ಎಚ್. ಶಕುಂತಲಾ ಭಟ್ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ ಇವರ ಆಶ್ರಯದಲ್ಲಿ ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷ ನೀಡುವ ಗೆಳೆಯರ ಬಳಗ ಕಾರಂತ ಪುರಸ್ಕಾರ – 2025 ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಎಚ್. ಶಕುಂತಲಾ ಭಟ್ ಆಯ್ಕೆಯಾಗಿದ್ದಾರೆ.

ಅವರು ಕಾರಂತರ ಒಡನಾಡಿಯಾಗಿ, ಸಮಾಜ ಸೇವೆ, ಖ್ಯಾತ ಲೇಖಕಿಯಾಗಿ, ಸಂಘಟಕಿ, ಕವಿ, ಸಾಂಸ್ಕೃತಿಕ ಕಥೆಗಾರರಾಗಿ ಗುರುತಿಸಿಕೊಂಡಿದ್ದಾರೆ. ಸುಮಾರು 90 ಗ್ರಂಥಗಳನ್ನು ಬರೆದಿದ್ದಾರೆ. ಕನ್ನಡ ಹಾಗೂ ತುಳು ಭಾಷೆ ಸಾಹಿತ್ಯ ಕ್ಷೇತ್ರದಲ್ಲಿಸೇವೆ ಸಲ್ಲಿಸುತ್ತಿದ್ದಾರೆ.

ಈ ಹಿಂದೆ ಮಾಲಿನಿ ಮಲ್ಯ, ಎಸ್. ನಾರಾಯಣ ರಾವ್, ಪೇತ್ರಿ ಮಾಧವ ನಾಯಕ್, ಶ್ರೀನಿವಾಸ ಸಾಸ್ತಾನ, ಹಿರಿಯಡ್ಕ ಗೋಪಾಲರಾವ್, ಎಚ್. ಇಬ್ರಾಹಿಂ ಸಾಹೇಬ್, ಪಾಂಡೇಶ್ವರ ಚಂದ್ರಶೇಖರ ಚಡಗ, ಬನ್ನಂಜೆ ಸಂಜೀವ ಸುವರ್ಣ, ವೈದೇಹಿ, ಹಾಗೂ ಡಾ.ನಾ ಮೊಗಸಾಲೆ, ಗೆಳೆಯರ ಬಳಗ ಕಾರಂತ ಪುರಸ್ಕಾರ ಪಡೆದವರಾಗಿದ್ದಾರೆ.

ಈ ಪುರಸ್ಕಾರವು ಗೌರವಧನ ಹಾಗೂ ಸನ್ಮಾನ ಪತ್ರ ಒಳಗೊಂಡಿದೆ.

ಇದೇ ಬರುವ ಅಕ್ಟೋಬರ್ 17ರ ಶುಕ್ರವಾರ ಸಂಜೆ ಕಾರ್ಕಡ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ  ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರಗಲಿದೆ ಎಂದು ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ತಿಳಿಸಿದ್ದಾರೆ.

Exit mobile version