Kundapra.com ಕುಂದಾಪ್ರ ಡಾಟ್ ಕಾಂ

ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಅಂಗವಾಗಿ ವಿವಿಧ ಸ್ಪರ್ಧೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಫುಟ್‌ಬಾಲ್, ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್, ಖೋ-ಖೋ, ಹ್ಯಾಂಡ್‌ಬಾಲ್ ಮತ್ತು ಈಜು ಸ್ಪರ್ಧೆಗಳು ಸೆಪ್ಟಂಬರ್ 13 ಮತ್ತು 14 ರಂದು ಹಾಸನದ ಜಿಲ್ಲಾ ಕ್ರೀಡಾಂಗಣ ಹಾಗೂ ಹಾಕಿ, ಯೋಗ ಮತ್ತು ಜಿಮ್ನಾಸ್ಟಿಕ್ಸ್ (ಆಯ್ಕೆ) ಸ್ಪರ್ಧೆಗಳು ಸೆಪ್ಟಂಬರ್ 15 ರಂದು ಕೊಡಗು ಜಿಲ್ಲೆ ಕೂಡಿಗೆ ಕ್ರೀಡಾಶಾಲೆಯಲ್ಲಿ ನಡೆಯಲಿವೆ.

ಸದರಿ ಕ್ರೀಡಾಕೂಟದಲ್ಲಿ ಜಿಲ್ಲೆಯಿಂದ ಭಾಗವಹಿಸುವ ಕ್ರೀಡಾಪಟುಗಳು ಆನ್‌ಲೈನ್ ಮೂಲಕ ನೋಂದಾವಣೆ ಮಾಡಿದ ಗುರುತಿನ ಚೀಟಿ ಹಾಗೂ ಇತರ ದಾಖಲೆಗಳೊಂದಿಗೆ ನಿಗಧಿತ ದಿನದಂದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂ: 0820-2521324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Exit mobile version