ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಂಡ್ಮಿ ಸಾಸ್ತಾನ ಇಲ್ಲಿ ಎಲ್.ಕೆ.ಜಿ., ಯು. ಕೆ. ಜಿ.ಹಾಗೂ ದ್ವಿಭಾಷಾ ಮಾಧ್ಯಮ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಬಹುತೇಕ ಪದವೀಧರ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಶ್ಲಾಘಿಸಿದರು.
ಇದೇ ವೇಳೆ ಶಾಲಾ ಮಕ್ಕಳಿಗೆ ನೀಡಿದ ಕೊಡುಗೆಗಳನ್ನು ಮಕ್ಕಳಿಗೆ ವಿತರಿಸಲಾಯಿತು.
ವೇದಿಕೆಯಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ವಿಜಯಲಕ್ಷ್ಮಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೋಜ್ ಕುಮಾರ್, ಸಾಸ್ತಾನ ಸಿಎ ಬ್ಯಾಂಕ್ ಅಧ್ಯಕ್ಷ ಸುರೇಶ್ ಅಡಿಗ, ಎಸ್‌ಡಿಎಂಸಿ ಸಮನ್ವಯ ವೇದಿಕೆ ಬ್ರಹ್ಮಾವರ ತಾಲೂಕಿನ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಉದ್ಯಮಿ ಸುರೇಶ್ ಕುಂದರ್ ಐರೋಡಿ, ಪಟ್ಟಣ ಪಂಚಾಯತ್ ಸಾಲಿಗ್ರಾಮದ ಸದಸ್ಯೆ ಸುಲತಾ ಹೆಗ್ಡೆ, ನಿವೃತ್ತ ಮುಖ್ಯೋಪಾಧ್ಯಾಯ ಗಣೇಶ್. ಜಿ.,ನಿವೃತ್ತ ಪೊಲೀಸ್ ಅಧಿಕಾರಿ ಲಕ್ಷ್ಮೀನಾರಾಯಣ, ದಾನಿಗಳಾದ ಪ್ರತಾಪ್ ಖಾರ್ವಿ ಹಾಗೂ ಅಮಿತ್ ಕುಮಾರ್. ಸಾಮಾಜಿಕ ಕಾರ್ಯಕರ್ತ ಶಂಕರ್ ಕುಲಾಲ್, ಶ್ರೀನಿವಾಸ ಶೆಟ್ಟಿಗಾರ್, ಗುಂಡ್ಮಿ ಪ್ರೌಢಶಾಲಾ ಮುಖ್ಯಶಿಕ್ಷಕ ಸತೀಶ್ ಐತಾಳ್ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಉಷಾ ಸ್ವಾಗತಿಸಿದರು. ಸಹ ಶಿಕ್ಷಕಿ ವಿಜಯ ದಾನಿಗಳ ಪಟ್ಟಿಯನ್ನು ಓದಿದರು. ಸಹ ಶಿಕ್ಷಕಿ ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಗುಲಾಬಿ ವಂದಿಸಿದರು.

