Site icon Kundapra.com ಕುಂದಾಪ್ರ ಡಾಟ್ ಕಾಂ

ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವ ವಿರುದ್ಧ ಕುಂದಾಪುರ ಬಿಜೆಪಿ ಯುವ ಮೋರ್ಚ ದೂರು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಭಾರತೀಯ ಜನತಾ ಪಕ್ಷದ ಧ್ವಜ ಮತ್ತು ಭಾರತ ದೇಶದ  ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರನ್ನು ಹೋಲುವ ಹಾಗೂ ದಂಗೆ ಎದ್ದಿರುವ ಜನರ ವ್ಯಂಗ್ಯ ಚಿತ್ರವನ್ನು ಫೇಸ್ ಬುಕ್, ಇನ್ಸ್ಟಾಗ್ರಾಂ ಸಾಮಾಜಿಕ ಜಾಲತಾಣದಲ್ಲಿ ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಸಂದೇಶಗಳನ್ನು ಹಂಚಿಕೊಂಡ ದೇಶದ್ರೋಹಿ ಪ್ರಚಾರ ಮಾಡುವ ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕ ರೋಷನ್ ಶೆಟ್ಟಿ ಅವರ ವಿರುದ್ಧ ಕುಂದಾಪುರ ಮಂಡಲ ಬಿಜೆಪಿ ಯುವಮೋರ್ಚ ಅಧ್ಯಕ್ಷ  ಕಿರಣ್ ಪೂಜಾರಿ ತೆಕ್ಕಟ್ಟೆ ನೇತೃತ್ವದ ತಂಡದಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವಂತೆ ಕುಂದಾಪುರ ಠಾಣಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ, ಗೋಪಾಡಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ವಕ್ವಾಡಿ ಸುಧೀರ್ ಕೆಎಸ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ, ಕುಂದಾಪುರ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ಖಾರ್ವಿ, ಕುಂದಾಪುರ ಮಂಡಲ ಉಪಾಧ್ಯಕ್ಷ ಸುನಿಲ್ ಶೆಟ್ಟಿ ಹೇರಿಕುದ್ರು, ಕುಂದಾಪುರ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್, ಸಂಗಮ್ ಮಂಡಲ ಯುವ ಮೋರ್ಚಾ ಕಾರ್ಯದರ್ಶಿ ರಂಜಿತ್ ದೇವಾಡಿಗ, ಪುರಸಭಾ ಸದಸ್ಯರಾದ ರಾಘವೇಂದ್ರ ಖಾರ್ವಿ, ಗಿರೀಶ್ ದೇವಾಡಿಗ, ಪ್ರಮುಖರಾದ ದಿವಾಕರ್ ಕಡ್ಗಿ, ನಾಗರಾಜ್ ಕಾಂಚನ್ ಇನ್ನಿತರರು ಉಪಸ್ಥಿತರಿದ್ದರು.

Exit mobile version