Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಚರ್ಮ ಕುಶಲಕರ್ಮಿಗಳ ಸರ್ವತೋಮುಖ ಅಭಿವೃದ್ಧಿüಗಾಗಿ ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಯಡಿಯಲ್ಲಿ ಅನುಷ್ಠಾನಗೊಳಿಸಲಾದ ವಿವಿಧ ಆರ್ಥಿಕ ಅಭಿವೃದ್ಧಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಂದ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in/, https://sevasindhuservices.karnataka.gov.in ಮೂಲಕ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಸಂಯೋಜಕರು, ಉಡುಪಿ ಮೊಬೈಲ್ ಸಂ: 9880486220, 6362891017 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ಸಂಯೋಜಕರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version