Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ ಬಿ. ಹೆಗ್ಡೆ ಕಾಲೇಜು: ಸ್ವಾಸ್ತ್ಯ ಸಂಕಲ್ಪ – ಆರೋಗ್ಯ ಅರಿವು ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ  
ಕುಂದಾಪುರ: ಇಲ್ಲಿನಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ರೋವರ್ಸ್ & ರೇಂಜರ್ಸ್ ಘಟಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಆರೋಗ್ಯ ಅರಿವು ಕಾರ್ಯಕ್ರಮವನ್ನು ಕಾಲೇಜಿನ ಎ.ವಿ. ಹಾಲ್‌ನಲ್ಲಿ ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಜನ ಜಾಗೃತಿ ವೇದಿಕೆ, ಉಡುಪಿ ಇದರ ಸದಸ್ಯರಾದ ಸುಬ್ರಹ್ಮಣ್ಯ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ದುಶ್ಚಟಗಳಿಂದಾಗುವ ಪರಿಣಾಮಗಳು ಮತ್ತು ಅದರಿಂದ ಪಾರಾಗುವ ಮಾರ್ಗಗಳು ಕುರಿತು ವಿದ್ಯಾರ್ಥಿಗಳಿಗೆ  ತಿಳಿ ಹೇಳಿದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು ಬಿ.ಸಿ. ಟ್ರಸ್ಟ್ ಇದರ ಕಾರ್ಯಕ್ರಮ ಅಧಿಕಾರಿಗಳಾದ ಉಮೇಶ್ ಶೆಟ್ಟಿ, ತಲ್ಲೂರು ವಲಯ ಇದರ ಮೇಲ್ವಿಚಾರಕಿ ನಾಗರತ್ನ ಜಯರಾಂ, ಸೇವಾ ಪ್ರತಿನಿಧಿ ಶಾಂತ ವಿ., ಮಾಲತಿ ಆರ್. ಶೆಟ್ಟಿ, ಕಾಲೇಜಿನ ರೋವರ್ ಹಾಗೂ ರೆಂಜರ್ಸ್ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ ಗಂಗೊಳ್ಳಿ ಸ್ವಾಗತಿಸಿ, ರೇಂಜರ್ ಲೀಡರ್  ಜೋಸ್ಲಿನ್ ರೆನಿಟಾ ಅಲ್ಮೇಡಾ ವಂದಿಸಿದರು. ಕಾರ್ಯಕ್ರಮ ನಿರೂಪಿಸಿದರು.

Exit mobile version