ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ಗಂಟಿಹೊಳೆ ನಿವಾಸಿ ಕೃಷ್ಣ ಶೆಟ್ಟಿ (42) ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಭಾನುವಾರ ಸಂಜೆ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತಲೆಗೆ ಏಟು ತಗುಲಿತ್ತು. ಸೋಮವಾರ ಬೆಳಗ್ಗೆ ನೋವು ಕಾಣಿಸಿದ್ದು, ಕೂಡಲೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.
ಅಲ್ಲಿನ ವೈದ್ಯರು ಪರೀಕ್ಷಿಸಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ ಮೇರೆಗೆ ಮರಳಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂಜೆ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪದೆಕರಣ ದಾಖಲಾಗಿದೆ.

