Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಇಂಡಕ್ಷನ್ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ  ಇಂಡಕ್ಷನ್ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ  ಗವರ್ನ್‌ಮೆಂಟ್ ಟೆಕ್ ಕೆಪಿಎಮ್‌ಜಿ ಇಂಡಿಯಾದ ಸಹಾಯಕ ನಿರ್ದೇಶಕರಾದ ಡಾ. ರತನ್ ಮುರಳೀದರ್  ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಒಬ್ಬ ವಿದ್ಯಾರ್ಥಿಯಾಗಿ, ನಿಮ್ಮ ಸುತ್ತಲಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳನ್ನು ಪರಿಹರಿಸಲು ನಿಮ್ಮ ಕೌಶಲ್ಯಗಳನ್ನು ಬಳಸಿಕೊಳ್ಳಬೇಕು, ಆ ನಿಟ್ಟಿನಲ್ಲ್ ವಿದ್ಯಾರ್ಥಿಗಳು ಪ್ರಯತ್ನ ಪಡುತ್ತಲೇ ಇರಬೇಕು ಎಂದು ಪ್ರೋತ್ಸಾಹಿಸಿದರು.”

ವಿವಿಧ ವಿಭಾಗದ ಡೀನ್ ಅವರು ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳು , ಪ್ಲೇಸ್ಮೆಂಟ್ ವಿಭಾಗದ ತರಭೇತಿ ಇನ್ನಿತರ ವಿಷಯಗಳ ಬಗ್ಗೆ ವಿವರಣೆ ನೀಡಿದರು.

ಅಧ್ಯಕ್ಷತೆ ವಹಿಸಿದ ಕಾಲೇಜಿನ  ಬ್ರ್ಯಾಂಡ್ ಬಿಲ್ಡಿಂಗ್ ವಿಭಾಗದ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ ಅವರು ಮಾತನಾಡಿ, ವಿದ್ಯಾರ್ಥಿಗಳು ಈಗ ಕೇವಲ ವ್ಯಕ್ತಿಗಳಲ್ಲ, ನಮ್ಮ ಸಂಸ್ಥೆಯ ಪ್ರತಿನಿಧಿಗಳು ಎನ್ನುತ್ತ ತಾವು ಶಿಸ್ತನ್ನು ಕಾಪಾಡಿಕೊಳ್ಳುವುದು, ಬಲವಾದ ವೈಯಕ್ತಿಕ ಬ್ರ್ಯಾಂಡ್ ಅನ್ನು ಅಭಿವೃದ್ಧಿಪಡಿಸುವುದು ಮತ್ತು ನಾಯಕತ್ವ, ಆತ್ಮವಿಶ್ವಾಸ ಮತ್ತು ಭಾವನಾತ್ಮಕ ಬುದ್ಧಿವಂತಿಕೆಯಂತಹ ಮೃದು ಕೌಶಲ್ಯಗಳ ಮೇಲೆ ಕೆಲಸ ಮಾಡುವುದರ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು.

ಪಠ್ಯೇತರ ಚಟುವಟಿಕೆಗಳು, ಕ್ಲಬ್‌ಗಳು, ಕಾರ್ಯಾಗಾರಗಳು ಮತ್ತು ಅವರ ಒಟ್ಟಾರೆ ಬೆಳವಣಿಗೆಗೆ ಕೊಡುಗೆ ನೀಡುವ ಘಟನೆಗಳಲ್ಲಿ ಭಾಗವಹಿಸಲು ಅವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ನೆರೆದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಲಾಯಿತು.

ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು, ಪೋಷಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಇಶ್ರತ್ ಹಾಗೂ ಮಿನಾಜ಼್ ಕಾರ್ಯಕ್ರಮ ನಿರೂಪಿಸಿದರು. ಅಂತಿಮ ವರ್ಷದ ವಿದ್ಯಾರ್ಥಿನಿ ಸುಪ್ರೀತ ಸ್ವಾಗತಿಸಿ, ಅನಿಶ್ ಪೂಜಾರಿ ವಂದಿಸಿದರು.

ಒಂದು ವಾರಗಳ ಇಂಡಕ್ಷನ್ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ನೀತಿ, ಅನ್ವೇಷಣೆ, ತಾಂತ್ರಿಕ, ಕಲೆ, ಆಂಗ್ಲ ಭಾಷೆ, ಹೀಗೆ ವಿವಿಧ ವಿಭಾಗದಲ್ಲಿ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ತರಭೇತಿ ನೀಡಲಾಯಿತು.

Exit mobile version