Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರ ನೇಮಕಾತಿಗೆ ಸಂದರ್ಶನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ
: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರ ನೇಮಕಾತಿಗೆ ಸಂದರ್ಶನವು ಅಕ್ಟೋಬರ್ 9 ರಂದು ಬೆಳಗ್ಗೆ 10.30 ಕ್ಕೆ ಉಡುಪಿಯ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.

ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 18 ವರ್ಷ ಮೇಲ್ಪಟ್ಟ, ಉತ್ತಮ ಸಂವಹನ ಕೌಶಲ್ಯ ಹಾಗೂ ವಿಮಾ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹರು ಸಂದರ್ಶನ ನಡೆಯುವ ದಿನದಂದು ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿ ಅಥವಾ ಅಂಚೆ ಜೀವವಿಮೆ ಅಭಿವೃದ್ಧಿ ಅಧಿಕಾರಿ, ಉಡುಪಿ ಅಂಚೆ ವಿಭಾಗ ಮೊ.ನಂ: 9482914676 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version