Site icon Kundapra.com ಕುಂದಾಪ್ರ ಡಾಟ್ ಕಾಂ

ಇಸ್ಪೀಟ್‌ ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ: ನಾಲ್ವರು ವಶ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಗುಲ್ವಾಡಿ ಗ್ರಾಮದ ಅರೆಕಲ್ಲು ಹುಣ್ಣೆಮನೆ ಎಂಬಲ್ಲಿ ನಡೆಯುತ್ತಿದ್ದ ಅಂದರ್-ಬಹರ್ ಇಸ್ಪೀಟ್‌ ಜುಗಾರಿ ಅಡ್ಡೆಗೆ ಗ್ರಾಮಾಂತರ ಠಾಣೆಯ ಪಿಎಸ್‌ಐ ಚಂದ್ರಕಲಾ ಪತ್ತಾರ ಹಾಗೂ ಪೋಲಿಸರು ದಾಳಿ ನಡೆಸಿದ್ದಾರೆ.

ಆರೋಪಿಗಳಾದ ಸಮರ್ಥ ಕಾರ್ಕಳ (27), ಕಿಶನ್ ತಗ್ಗರ್ಸೆ (45), ಪ್ರದೀಪ್ ಮಂಗಳೂರು (42), ನಿಸಾರ್ ಶೇಖ್ ಗುಲ್ವಾಡಿ (42) ಎಂಬವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆಟದಲ್ಲಿ ಭಾಗಿಯಾಗಿದ್ದ ಕೆಲವರು ತಪ್ಪಿಸಿಕೊಂಡಿದ್ದಾರೆ.

ಆರೋಪಿಗಳಿಂದ ಅಂದರ್ – ಬಾಹರ್ ಜುಗಾರಿ ಆಟಕ್ಕೆ ಬಳಸಿದ ನಗದು ಹಣ 11,620 ರೂಪಾಯಿ, 4 ಮೊಬೈಲ್, 1 ಕಾರು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Exit mobile version