ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ ಅವರ ಶಾಸಕರ ಅನುದಾನದಿಂದ ಕೋಟತಟ್ಟು ಪಡುಕರೆ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಶುಕ್ರವಾರ ಹಸ್ತಾಂತರಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಜಾನಕಿ ಅವರು ಮಾತನಾಡಿ, ಪಂಚಾಯತ್ ವಾರ್ಡ್ ಸದಸ್ಯರಾದ ರವೀಂದ್ರ ತಿಂಗಳಾಯ ಅವರು ಬಹುಕಾಲದ ಬೇಡಿಕೆಯ ಕುಡಿಯುವ ನೀರಿನ ಘಟಕ ಮಂಜೂರು ಮಾಡಿಸಲು ಶ್ರಮಿಸಿದ್ದು ಅವರಿಗೆ ಹಾಗೂ ಅನುದಾನ ನೀಡಿದ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ ಅವರಿಗೆ ಶಾಲೆಯ ಮತ್ತು ವಿದ್ಯಾರ್ಥಿಗಳ ಪರವಾಗಿ ಧನ್ಯವಾದ ತಿಳಿಸಿದರು.

ಕೋಟತಟ್ಟು ಪಂಚಾಯತ್ ಸದಸ್ಯರಾದ ಅಶ್ವಿನಿ ದಿನೇಶ್, ರವೀಂದ್ರ ತಿಂಗಳಾಯ, ಸೀತಾ, ಮುಖ್ಯೋಪಾಧ್ಯಾಯರಾದ ಜಾನಕಿ, ಮಾಜಿ ಪಂಚಾಯತ್ ಅಧ್ಯಕ್ಷ ರಘು ತಿಂಗಳಾಯ, ಮಾಜಿ ಉಪಾಧ್ಯಕ್ಷ ಲೋಕೇಶ್ ಶೆಟ್ಟಿ, ಮಾಜಿ ಪಂಚಾಯತ್ ಸದಸ್ಯ ರಾಮ ಎಂ. ಬಂಗೇರ, ಶಿಕ್ಷಕಿ ಸಂಗೀತ ಎಸ್.ಕೆ, ಗಣೇಶ್ ಆಚಾರಿ, ಲಕ್ಷಣ ಸುವರ್ಣ, ಶೈಲಜಾ ಎಲ್.ಆರ್, ವೀಣಾ ಪ್ರಕಾಶ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.