ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ , ಸೋಮವಾರ ಧಾರ್ಮಿಕ ಕಾರ್ಯಕ್ರಮಳಿಗೆ ಚಾಲನೆ ನೀಡಲಾಯಿತು.
ದೇವಸ್ಥಾನದ ಆಡಳಿತ ಮಂಡಳಿ ಗೌರವಾಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರು ಚಾಲನೆ ನೀಡಿದರು. ಅಧ್ಯಕ್ಷರಾದ ನಾಗರಾಜ ಶೆಟ್ಟಿ, ಅರ್ಚಕರಾದ ಕೃಷ್ಣ ಮೂರ್ತಿ ನಾವಡ , ಸದಸ್ಯರುಗಳಾದ ಪ್ರಸನ್ನ, ಶಂಕರ, ರವೀಂದ್ರ ಶ್ಯಾನುಭೋಗ್, ಅಣ್ಣಪ್ಪ ಪೂಜಾರಿ, ಭಕ್ತಾಧಿಗಳು ಮೊದಲಾದವರು ಉಪಸ್ಥಿತರಿದ್ದರು.
ಅರ್ಚಕರಾದ ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳ ಆರಂಭಗೊಂಡವು. ದೇವಸ್ಥಾನದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 02ರವರೆಗೆ ಪ್ರತಿನಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

