Site icon Kundapra.com ಕುಂದಾಪ್ರ ಡಾಟ್ ಕಾಂ

ಸೆ.24ರಂದು ಮೈಸೂರು ದಸರಾದಲ್ಲಿ ಸುರಭಿ ಕಲಾವಿದರಿಂದ ಯಕ್ಷಗಾನ ವೈಭವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಬೈಂದೂರಿನ ಸುರಭಿಯ ಹಿರಿಯ ಹಾಗೂ ಕಿರಿಯ ಕಲಾವಿದ ಕೂಡುವಿಕೆಯಲ್ಲಿ ಪ್ರಥಮ ಬಾರಿಗೆ ಯಕ್ಷಗಾನ ವೈಭವ ನಡೆಯಲಿದೆ.

ಸೆ.24 ಬುಧವಾರ ಸಂಜೆ 7.30ಕ್ಕೆ ಮೈಸೂರು ರಮಾ ಗೋವಿಂದ ರಂಗಮಂದಿರದಲ್ಲಿ ಸುರಭಿ ಕಲಾವಿದರಿಂದ ಸುಧನ್ವಾರ್ಜುನ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಯಕ್ಷಗಾನವನ್ನು ಸಂಸ್ಥೆಯ ಯಕ್ಷಗುರು ಪ್ರಶಾಂತ ಮಯ್ಯ ದಾರಿಮಕ್ಕಿ ಅವರು ನಿರ್ದೇಶನ ಮಾಡಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Exit mobile version