Site icon Kundapra.com ಕುಂದಾಪ್ರ ಡಾಟ್ ಕಾಂ

ಮಣೂರು ಸ್ನೇಹಕೂಟ ದಶಮಾನೋತ್ಸವ ಸರಣಿ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಇಲ್ಲಿನ ಸ್ನೇಹಕೂಟ ಮಣೂರು ಇದರ ದಶಮಾನೋತ್ಸವದ ಹಿನ್ನಲೆಯಲ್ಲಿ ವಿವಿಧ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಭಾಗವಾಗಿ ಇತ್ತೀಚಿಗೆ ಸಾಲಿಗ್ರಾಮದ ತೊಡ್ಕಟ್ಟು ಹೊಸಬದುಕು ಆಶ್ರಮದಲ್ಲಿ ನಮ್ಮ ಸ್ನೇಹ ನೆರವು, ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನಗೊಂಡಿತು.

ಕಾರ್ಯಕ್ರಮವನ್ನು ಸ್ನೇಹಕೂಟ ಸಂಚಾಲಕಿ ಭಾರತಿ ವಿ. ಮಯ್ಯ ದೀಪ ಬೆಳಗಿಸಿ, ಉದ್ಘಾಟಿಸಿದರು. ಹೊಸಬದುಕು ಆಶ್ರಮದ ನಿವಾಸಿಗಳಿಗೆ ವಿವಿಧ ಪರಿಕರಗಳನ್ನು  ಸ್ನೇಹಕೂಟದ ನಿರ್ದೇಶಕ ವಿಷ್ಣಮೂರ್ತಿ ಮಯ್ಯರು, ಆಶ್ರಮದ ಮುಖ್ಯಸ್ಥ ವಿನಯಚಂದ್ರ ಸಾಸ್ತಾನ ಅವರಿಗೆ ಹಸ್ತಾಂತರಿಸಿದರು.

ಆಶ್ರಮದ ನಿವಾಸಿಗಳಿಗೆ ಹಾಗೂ ಉಪಹಾರದ ವ್ಯವಸ್ಥೆ ಕಲ್ಪಿಸಿದರು. ಮುಖ್ಯ ಅತಿಥಿಯಾಗಿ ಆಟ್೯ ಆಫ್ ಲಿವಿಂಗ್‌ನ ದಕ್ಷಿಣ ದಿವ್ಯ ಸಾಲಿಗ್ರಾಮ, ಪತ್ರಕರ್ತ ರವೀಂದ್ರ ಕೋಟ, ಆಶ್ರಮದ ನಿರ್ದೇಶಕಿ ರಾಜಶ್ರೀ ವಿನಯಚಂದ್ರ ಉಪಸ್ಥಿತರಿದ್ದರು.

ಸ್ನೇಹಕೂಟದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜತೆಗೆ ಕ್ರೀಡೆ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸುಜಾತ ಬಾಯರಿ ಸ್ವಾಗತಿಸಿ, ಕಾರ್ಯಕ್ರನವನ್ನು ಸ್ನೇಹಕೂದ ಶ್ರೀದೇವಿ ಹಂದೆ ನಿರೂಪಿಸಿ, ಭಾರತಿ ಮಯ್ಯ ವಂದಿಸಿದರು.

Exit mobile version