Site icon Kundapra.com ಕುಂದಾಪ್ರ ಡಾಟ್ ಕಾಂ

ಕರ್ನಾಟಕ ಸೀನಿಯರ್ ವಾಲಿಬಾಲ್ ಚಾಂಪಿಯನ್‌ಶಿಪ್: ಆಳ್ವಾಸ್ ಚಾಂಪಿಯನ್ಸ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಮೂಡುಬಿದಿರೆ: 
ಕರ್ನಾಟಕ ವಾಲಿಬಾಲ್ ಸಂಸ್ಥೆ ಆಯೊಜಿಸಿದ್ದ  ಲೋಕೆಶ್ ಗೌಡ ಟ್ರೋಫಿ ಕರ್ನಾಟಕ ಸೀನಿಯರ್ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಸ್ಪೋಟ್ಸ್ ಕ್ಲಬ್ ತಂಡ ಪುರುಷರ ವಿಭಾಗದಲ್ಲಿ  ಪ್ರಶಸ್ತಿ  ಗೆದ್ದುಕೊಂಡಿತು.

ಬೆಂಗಳೂರಿನ ಶ್ರೀಕಂಠಿರವ ಕ್ರೀಡಾಂಗಣದಲ್ಲಿ ನಡೆದ ಪುರುಷರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್ ತಂಡ 3-1 ಅಂತರದಿಂದ ಕರ್ನಾಟಕ ರಾಜ್ಯ ಪೋಲಿಸ್ ತಂಡವನ್ನು ಮಣಿಸಿತು. ತೀವ್ರ ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ ಮೇಲುಗೈ ಸಾಧಿಸಿದ ಆಳ್ವಾಸ್ ಆಟಗಾರರು ಪ್ರಶಸ್ತಿಗೆ ಮುತ್ತಿಕ್ಕಿದರು.

ಇದಕ್ಕೂ ಮೊದಲು ನಡೆದ ಸೆಮಿಫೈನಲ್‌ನಲ್ಲಿ ಆಳ್ವಾಸ್ ತಂಡ, ಕ್ರೀಡಾ ಹಾಸ್ಟೆಲ್ ಬಿಜಿ ತಂಡವನ್ನು  3-1 ಅಂತರದಿಂದ ಪರಭವಗೊಳಿಸಿತ್ತು.

ವಿಜೇತರಿಗೆ  ಕರ್ನಾಟಕದ ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಪ್ರಶಸ್ತಿ ವಿತರಿಸಿದರು. ವಿಜೇತ ತಂಡದ ಸದಸ್ಯರನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ. 

Exit mobile version