ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಬೈಕಿಗೆ ಕಾಡುಹಂದಿ ಢಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಗಂಗೊಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ಬನ್ನಾಡಿಯ ನಿವಾಸಿ ಬಸವರಾಜ್ ಪಿ.ಎಂ. ಗಾಯಗೊಂಡ ಘಟನೆ ಇಲ್ಲಿನ ಮಣೂರು ಸಮೀಪ ಮಂಗಳವಾರ ಸಂಭವಿಸಿದೆ.
ಗಸ್ತು ಕರ್ತವ್ಯ ಮುಗಿಸಿ ಬೆಳಗಿನ ಜಾವ ಗಂಗೊಳ್ಳಿ ಪೊಲೀಸ್ ಠಾಣೆಯಿಂದ ಮನೆಗೆ ವಾಪಸಾಗುತ್ತಿದ್ದಾಗ ಕಾಡು ಹಂದಿ ಅಡ್ಡ ಬಂದು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದರು. ಕುಂದಾಪುರ ಕಡೆಯಿಂದ ವೇಗವಾಗಿ ಬಂದ ಟಿಪ್ಪರ್ ಚಾಲಕ ಬೈಕಿನ ಮೇಲೆಯೇ ಚಲಾಯಿಸಿಕೊಂಡು ಪರಾರಿಯಾದನು ಎನ್ನಲಾಗಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

